ಧಾರವಾಡ ಪ್ರಜಾಕಿರಣ. ಕಾಮ್ ಫೆ.1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆಗಾಗಿ ಇಂದು ಸಂಸತ್ತಿಗೆ ಆಗಮಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟು ಬಂದಿರುವುದು ವಿಶೇಷ. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ನಮ್ಮ ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳಾಮಣಿಗಳು ಅನ್ನುವುದು ಇನ್ನೂ ವಿಶೇಷ. ಜಿಲ್ಲೆಯ ಸಂಸದರು, ಕೇಂದ್ರ ಸಚಿವರು […]
ನವದೆಹಲಿ prajakiran.com : ಕಳೆದ 24 ಗಂಟೆಗಳಲ್ಲಿ 2,11,298 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, 3,847 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆಯ ವರದಿ ಪ್ರಕಾರ, ನಿನ್ನೆ ದೇಶದಲ್ಲಿ 2,11,298 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,73,69,093ಕ್ಕೆ ಏರಿಕೆಯಾಗಿದೆ. 24,19,907 ಮಂದಿ ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಒಂದೇ ದಿನ 2,83,135 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,46,33,951ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗು 3,15,235 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. […]
ನವದೆಹಲಿ prajakiran.cim : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 54,069 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ದೇಶದಾದ್ಯಂತ 1,321 ಸೋಂಕಿತರು ಅಸುನೀಗಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 54,069 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,00,82,778 ಕ್ಕೆ ಏರಿಕೆಯಾಗಿದೆ. ನಿನ್ನೆ ದೇಶದಲ್ಲಿ 68,885 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2,90,63,740ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ […]