ಜಿಲ್ಲೆಯಲ್ಲಿ 718 ಬಿಡುಗಡೆ
ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.
ಸೋಂಕಿತರ ಸಂಖ್ಯೆ ಬುಧವಾರ ಮತ್ತೆ ಸ್ವಲ್ಪ ಕಡಿಮೆಯಾಗಿದೆ.
ಇಂದು ಮತ್ತೆ 853 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ.
ದುರಂತದ ಸಂಗತಿಯೆಂದರೆ ಇಂದು ಬರೋಬ್ಬರಿ 12 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.
ಹುಬ್ಬಳ್ಳಿಯ ಕಿಮ್ಸ ನಲ್ಲಿ 3, ಲೈಫ್ ಲೈನ್ ನಲ್ಲಿ 1, ಧಾರವಾಡ ಎಸ್ ಡಿಎಂ ನಲ್ಲಿ 4, ಧಾರವಾಡ ಜಿಲ್ಲಾಸ್ಪತ್ರೆ 4 ಜನ ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಆತಂಕದ ವಿಚಾರವೆಂದರೆ 566 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7313 ಕ್ಕೆ ಎರಿಕೆ ಆಗಿದೆ.
ಸಮಾಧಾನದ ಸಂಗತಿಯೆಂದರೆ ಸೋಂಕಿತರು 718 ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.