ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,65,553 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,65,553 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,78,94,800 ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 2,76,309 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,54,54,320ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 21,14,508 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶಾದ್ಯಂತ ಶನಿವಾರ 3,460 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,25,972 ಕ್ಕೆ ಏರಿಕೆಯಾಗಿದೆ.