ನವದೆಹಲಿ prajakiran.com ಜೂ. 9 : ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಜೂನ್.11ರಂದು ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲು ಮುಂದಾಗಿದೆ.
ಪೆಟ್ರೋಲ್ ಬಂಕ್ಗಳ ಮುಂದೆ ಈ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪಕ್ಷ ತಿಳಿಸಿದೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂಪಾಯಿ ದಾಟಿದೆ.
ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏರಿಕೆ ಮಾಡಲಾಗಿದೆ.
ಇದರಿಂದಾಗಿ ಜನಸಾಮಾನ್ಯರು ದ್ವಿಚಕ್ರ ವಾಹನದಲ್ಲಿ ಓಡಾಡುವುದು ಕಷ್ಟಕರವಾಗಿದೆ.
ಕರೋನಾ ಸಂಕಷ್ಟದ ದಿನಗಳಲ್ಲಿ ಕೇಂದ್ರ ಸರ್ಕಾರ ಜನವಿರೋಧಿ ನಿಲುವು ತೆಳದಿರುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಕಿಡಿ ಕಾರಿದೆ.