ಬೆಂಗಳೂರು prajakiran.co ನ. 30: ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪುನರುಚ್ಚರಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. *ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು. ಕೋವಿಡ್ […]
ನವದೆಹೆಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,66,161 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,66,161 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,26,62,575ಕ್ಕೆ ಏರಿಕೆಯಾಗಿದೆ. ಭಾನುವಾರ ದೇಶದಲ್ಲಿ 3,53,818 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,86,71,222 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 37,45,237 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ […]
ಬೆಂಗಳೂರು ಪ್ರಜಾಕಿರಣ.ಕಾಮ್ ಆ14: ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು. ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ […]