ಸೋಮವಾರಪೇಟೆ Prajakiran.com : ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಳೆಗಾಲದ ಹಿನ್ನಲೆಯಲ್ಲಿ ಜೂನ್ 23ರಿಂದ ಮುಂದಿನ ಆದೇಶದವರೆಗೆ ಜಿಲ್ಲೆಯ ರಸ್ತೆಗಳಲ್ಲಿ ಮರ, ಮರಳು ಸೇರಿದಂತೆ ಸರಕು ಸಾಗಾಣೆಯ ಭಾರೀ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದಾರೆ.
ಆದರೆ ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಮಾದಾಪುರದಿಂದ ಚಿಕ್ಕಮಗಳೂರಿಗೆ ಸಿಲ್ವರ್ ಮರದ ನಾಟಾಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಸೋಮವಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಚಾರಣೆಯ ಬಳಿಕ ಮೊಕದ್ದಮೆ ದಾಖಲಿಸಲಾಗುವುದು ಎಂದು ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ತಿಳಿಸಿದ್ದಾರೆ.