ವಿಜಯಪುರ prajakiran.com : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಿಂದಗಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 30 ಸಾವಿರ ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿರುವುದು ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ದೊಡ್ಡ ಹುಮ್ಮಸ್ಸು ಮೂಡಿಸಿದೆ.
ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 93865 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮುನಗೂಳಿ 62680ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 4353 ಮತಗಳನ್ನು ಪಡೆದಿದ್ದಾರೆ.
ರಮೇಶ್ ಭೂಸನೂರು ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು, ನಾಯಕರು ಸಿಹಿ ಹಂಚಿ, ಬಣ್ಣ ಹಚ್ಚಿ ಜಯಯಕಾರ ಹಾಕುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿದ್ದು ಕಂಡು ಬಂತು.