ಧಾರವಾಡ prajakiran. com : ಡೆತ್ ನೋಟ್ ಬರೆದಿಟ್ಟು ಹೆಸ್ಕಾಂ ನೌಕರನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಉದಯಗಿರಿಯಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ 110ಕೆಬಿ ಮಾರ್ಗದ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮಹೇಶ ಸೊಂಟನವರ (24) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನು.
ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಾಂತೇಶ, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.