ಧಾರವಾಡ ಪ್ರಜಾಕಿರಣ.ಕಾಮ್ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ನಿನ್ನೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಗೆ ಜೈ ಜೈ ಹೇಳಿದ್ದಾರೆ.
ಅವರು ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎನ್ನಲಾಗಿದೆ.
ಅವರು ಈ ಹಿಂದೆ ಯಡಿಯೂರಪ್ಪ ಬಿಜೆಪಿ ತೊರೆದು ಕೆಜಿಪಿ ಕಟ್ಟಿದಾಗ ಅವರು ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು.
ಆನಂತರ ಮತ್ತೆ ಬಿಜೆಪಿ ಸೇರಿ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಆದಾಗ ಅವರ ಕಾನೂನು ಸಲಹೆಗಾರರಾಗಿ ನಿಯುಕ್ತಿಗೊಂಡಿದ್ದರು.
ಇದೀಗ ಧಾರವಾಡ ಜಿಲ್ಲೆಯಲ ಬಿಜೆಪಿ ಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಗುಟ್ಟಾಗಿ ಉಳಿದಿಲ್ಲ.
ಇತ್ತೀಚೆಗೆ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಪೂರ್ವ ವಿಧಾನ ಸಭಾ ಕ್ಷೇತ್ರದ ಚುನಾವಣೆಗಾಗಿ ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದರು.
ಅವರ ಬೆನ್ನಲ್ಲೇ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ ಹೇಳಿರುವುದು ನೋಡಿದರೆ ಇನ್ನು ಹಲವರು ಪಕ್ಷ ತೊರೆಯುವುದು ಖಚಿತ ಎನ್ನಲಾಗಿದೆ.