ರಾಜ್ಯ

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಿ ಎಬಿವಿಪಿ ಪ್ರತಿಭಟನೆ

ಧಾರವಾಡ ಪ್ರಜಾಕಿರಣ.ಕಾಮ್  : ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ, ಹಾಸ್ಟೆಲ್ ಸೌಲಭ್ಯ ಒದಗಿಸಿ ಹಾಗೂ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಎಬಿವಿಪಿ ಕಾರ್ಯಕರ್ತರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನ ಸಂಪರ್ಕ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಲಿಲ್ಲ ಎಂದು ಆಕ್ರೋಶಗೊಂಡು ಸರ್ಕಾರದ ವಿರುದ್ಧ ಹಾಗೂ ಸಚಿವ ಸಂತೋಷ ಲಾಡ್ ವಿರುದ್ಧ ಘೋಷಣೆ ಕೂಗುತ್ತ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಿ, ಸಚಿವ ಸಂತೋಷ ಲಾಡ್ ಅನುಪಸ್ಥಿತಿಯಲ್ಲಿ ಅವರ ಕುರ್ಚಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿನ ವಿದ್ಯಾರ್ಥಿಗಳು ಸರಿಯಾಗಿ ಶಾಲಾ ಕಾಲೇಜುಗಳಿಗೆ ಹೋಗಲು ಆಗುತ್ತಿಲ್ಲ, ಭ್ರಷ್ಟಾಚಾರದಿಂದ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು, ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಹಾಗೂ ಶಾಲಾ ಕಾಲೇಜುಗಳಿಗೆ ಹೋಗಲು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ ಕೊಡಬೇಕೆಂದು ಆಗ್ರಹಿಸಿದರು.

ಈಗಾಗಲೇ ರಾಜ್ಯಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರುಗಳ ಮೂಲಕ ಮನವಿ ಸಲ್ಲಿಕೆ ಮಾಡಲಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ನೀಡದೇ ನಿರ್ಲಕ್ಷ್ಯ ತೋರಿದರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ನಡೆಸಬೇಕಾಗುತ್ತದೆ ಎಂದು ಎಬಿವಿಪಿ ಕಾರ್ಯಕರ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *