ಗುಜರಾತ್ Prajakiran.com : ಟ್ರಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಹತ್ತು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಆನಂದ್ ಜಿಲ್ಲೆಯ ಇಂದ್ರನಾಜ್ ಗ್ರಾಮದ ಬಳಿ ನಡೆದಿದೆ.
ತಾರಾಪುರದಿಂದ ಅಹಮದಾಬಾದ್ಗೆ ತೆರಳುವ ಹೈವೇಯಲ್ಲಿ ಈ ಅಪಘಾತ ಸಂಭವಿಸಿದೆ.
ವೇಗವಾಗಿ ಬರುತ್ತಿದ್ದ ಟ್ರಕ್ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಇದರಿಂದಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತ ದೇಹಗಳ ಗುರುತು ಸಿಕ್ಕಿಲ್ಲ. ಕಾರಿನಲ್ಲಿ ಮಗುವೊಂದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.