ಅಂತಾರಾಷ್ಟ್ರೀಯ

ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿ 12 ಕ್ಕೂ ಹೆಚ್ಚು ಮಂದಿ ಸಾವು…..!

ದೆಹಲಿ-ಲಕ್ನೊ ಹೆದ್ದಾರಿಯಲ್ಲಿ  ಭೀಕರ ಅಪಘಾತ 

ನವದೆಹಲಿ prajakiran.com : ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, 12 ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ದೆಹಲಿ-ಲಕ್ನೊ ಹೆದ್ದಾರಿಯಲ್ಲಿ ನಡೆದಿದೆ.

ಪಂಜಾಬ್ ಮತ್ತು ಪಿಲ್ಫಿತ್ ನಡುವೆ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಟ್ರಕ್ ಹಿಂದಿನಿಂದ ಬಂದು ಗುದ್ದಿದ್ದು ಘಟನೆಯಲ್ಲಿ 12 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.

ಸ್ಥಳೀಯರ ಮಾಹಿತಿ ಪ್ರಕಾರ, ಬಸ್‌ನಲ್ಲಿ 50 ಮಂದಿ ಇದ್ದರು, ಹಾಗೂ ಟ್ರಕ್‌ನಲ್ಲಿ 25 ಮಂದಿ ಇದ್ದರು ಎನ್ನಲಾಗಿದೆ.

ಇದರ ಅನ್ವಯ ಪೊಲೀಸರು ತಕ್ಷಣ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *