ಧಾರವಾಡ prajakiran.com :
ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ
ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಈ ರ್ದುಘಟನೆ ನಡೆದಿದ್ದು,
ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಗ್ರಾಮದ ಬಳಿ ಈ ದುರಂತ ಜರುಗಿದೆ.
ಅಪಘಾತದಲ್ಲಿ ಸಾವನ್ನಪ್ಪಿದ
ಮೃತನ ಮಾಹಿತಿ ತಿಳಿದು ಬಂದಿಲ್ಲ.
ಈ ಕುರಿತು
ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು, ತನಿಖೆ ಮುಂದುವರೆದಿದೆ.