ಧಾರವಾಡ Prajakiran.com : ವಿದ್ಯುತ್ ಕಂಬಕ್ಕೆ ಗುದ್ದಿದ ಟ್ಯಾಂಕರ್ ಒಂದು ಪಲ್ಟಿಯಾಗಿ ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಬಳಿ ಸೋಮವಾರ ಬೆಳ್ಳಂ ಬೆಳಗ್ಗೆ ಸಂಭವಿಸಿದೆ.
ಇದರಿಂದಾಗಿ ದೊಡ್ಡ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ.
ಧಾರವಾಡ ಬೆಳಗಾವಿ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಇಬ್ಬರನ್ನೂ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದ ತಕ್ಷಣವೇ ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಏಕಾ ಏಕಿ ಟ್ಯಾಂಕರ್ ಪಲ್ಟಿ ಕುರಿತು ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.