ನವದೆಹಲಿ prajakiran.com : ದೆಹಲಿಯಲ್ಲಿ ಮತ್ತೆ ಮೇ.31ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಸತತವಾಗಿ 5ನೇ ಭಾರಿಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಲಸಿಕೆ ಪೂರೈಸಲು ಸಿದ್ಧತೆ ನಡೆಸಲಾಗುತ್ತಿದೆ.
ಸದ್ಯ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ.2.5ಕ್ಕೆ ಇಳಿದಿದ್ದು, ಕಳೆದ 24 ಗಂಟೆಗಳಲ್ಲಿ 1600 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ ಎಂದರು.