ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ, ಯಾವುದೇ ಪ್ರಾಣಾಪಾಯವಿಲ್ಲ
ನವದೆಹಲಿ prajakiran.com : ಏಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿ ತಿಳಿಸಿದೆ.
ಬುಧವಾರ ರಾತ್ರಿ 10:32ರ ವೇಳೆಗೆ ಆಸ್ಪತ್ರೆಯ 9ನೇ ಮಹಡಿಯಲ್ಲಿದ್ದ ರೆಫ್ರಿಜರೇಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಏಮ್ಸ್ ನ ರೋಗ ಪತ್ತೆ ಹಚ್ಚುವ ಪ್ರಯೋಗಾಲಯ ಹಾಗೂ ಕನ್ವರ್ಜೆನ್ಸ್ ಬ್ಲಾಕ್ ನ ಕೊಠಡಿಗಳಲ್ಲಿ ಬೆಂಕಿ ಅವಘಡ ಸಂಭವಿಸಿದೆ.