ರಾಜ್ಯ

ರಾಜ್ಯದಲ್ಲಿ ಶನಿವಾರ ಕರೋನಾ ಅಟ್ಟಹಾಸಕ್ಕೆ 42 ಸಾವು,1839 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 42 ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 1839 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ   21549 ಕ್ಕೆ ಏರಿಕೆಯಾಗಿದೆ.



 ಇಂದು ರಾಜ್ಯದಲ್ಲಿ 439  ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 9244   ಜನ ಗುಣಮುಖರಾಗಿದ್ದು, 11966    ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  226 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶನಿವಾರವೂ  42 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 335 ಕ್ಕೆ ಏರಿಕೆಯಾದಂತಾಗಿದೆ.



ಶನಿವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೇ  994 ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ 1172 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.



 ಇನ್ನೂಳಿದಂತೆ ದಕ್ಷಿಣ ಕನ್ನಡದಲ್ಲಿ 75, ಬಳ್ಳಾರಿ 72, ಬೀದರ 51, ಧಾರವಾಡ 45, ರಾಯಚೂರು 41, ಮೈಸೂರು 38, ಕಲಬರುಗಿ ಹಾಗೂ ವಿಜಯಪುರದಲ್ಲಿ ತಲಾ 37, ಮಂಡ್ಯ ಹಾಗೂ ಉತ್ತರಕನ್ನಡ ತಲಾ 35, ಶಿವಮೊಗ್ಗ 31, ಹಾವೇರಿ 28, ಬೆಳಗಾವಿ 27, ಹಾಸನ 25, ಉಡುಪಿ 18, ಚಿಕ್ಕಬಳ್ಳಾಪುರ ಹಾಗೂ ತುಮಕೂರದಲ್ಲಿ ತಲಾ 12, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರದಲ್ಲಿ ತಲಾ 11, ದಾವಣಗೆರೆ 7, ಚಾಮರಾಜನಗರ 5, ಗದಗ 4, ಕೊಪ್ಪಳ ಹಾಗೂ ಚಿಕ್ಕಮಗಳೂರಿನಲ್ಲಿ ತಲಾ 3, ರಾಮನಗರದಲ್ಲಿ 2, ಯಾದಗಿರಿಯಲ್ಲಿ ಒಂದು ಹೀಗೆ ಒಟ್ಟು 27 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ  ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಶನಿವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 24 ಜನ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ 1, ಬೀದರ 6, ಧಾರವಾಡ 3, ಕಲಬರುಗಿ 3, ದಕ್ಷಿಣ ಕನ್ನಡ 4, ಹಾಸನ 1 ಜಿಲ್ಲೆಯಲ್ಲಿ ತಲಾಒಬ್ಬರು ಸಾವನ್ನಪ್ಪಿದ್ದಾರೆ.  



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *