ರಾಜ್ಯ

ಸವದತ್ತಿ ಶಾಸಕರಾಗಿದ್ದ ವಿಧಾನ ಸಭೆಯ ಉಪ ಸಭಾಧ್ಯಕ್ಷ ಆನಂದ ಮಾಮನಿ ಇನ್ನಿಲ್ಲ

ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯ ವಿಧಾನ ಸಭೆಯ ಉಪ ಸಭಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ‌ಶನಿವಾರ ರಾತ್ರಿ ನಿಧನ ಹೊಂದಿದರು.

ಅವರುಬ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ಇಹಲೋಕವನ್ನು ತ್ಯಜಿಸಿದರು.

ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನ ಸಭಾ ಕ್ಷೇತ್ರದಿಂದ 2008, 2013 ಹಾಗೂ 2018ರಲ್ಲಿ ಮೂರು ಬಾರಿ
ಶಾಸಕರಾಗಿ ಆಯ್ಕೆಯಾಗಿದ್ದರು.

ಈ ಬಾರಿ ರಾಜ್ಯದ ಸಚಿವ ಸಂಪುಟದಲ್ಲಿ ಶತಾಯ ಗತಾಯ ಸಚಿವರಾಗಲೇಬೇಕೆಂಬ ಉತ್ಕಟ ಬಯಕೆಯನ್ನು ಹೊಂದಿದ್ದರು.

ಆದರೆ ಅವರ ತಂದೆಯಂತೆ ವಿಧಾನ ಸಭೆ ಉಪಸಭಾಧ್ಯಕ್ಷರಾಗಿದ್ದಾಗಲೇ ಆನಂದ ಮಾಮನಿ ಕೂಡ ನಿಧನ ಹೊಂದಿದ್ದು ವಿಧಿಯಾಟವೇ ಸರಿ.

ಅವರ ನಿಧನದ ಸುದ್ದಿ ತಿಳಿಯುತ್ತಲೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಭೇಟಿ ನೀಡಿ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *