ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಈಗ ಮತ್ತೊಮ್ಮೆ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಬೆಂಗಳೂರು ಹೈಕೋರ್ಟ್ ಪೀಠದ ಹಿರಿಯ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ನಾ ಅವರ ಎದುರು ಶುಕ್ರವಾರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ
ಈಗಾಗಲೇ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ, ಧಾರವಾಡ ಹೈಕೋರ್ಟ್ ಮತ್ತು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಈ ಹಿಂದೆ ತಿರಸ್ಕರಿಸಿದ್ದರು.
ಸಿಬಿಐ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಇತ್ತೀಚೆಗೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು.
ಹೀಗಾಗಿ ಮತ್ತೊಮ್ಮೆ ವಿನಯ ಕುಲಕರ್ಣಿ ಅವರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇಲ್ಲಿ ಮತ್ತೊಂದು ಸುತ್ತಿನ ವಾದ ಪ್ರತಿವಾದ ನಡೆದ ಬಳಿಕ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಸಿಗುತ್ತೋ ಇಲ್ಲವೋ ಎಂಬುದನ್ನು ಕಾಯ್ದು ನೋಡಬೇಕಾಗಿದೆ.