ರಾಜ್ಯ

ಚನ್ನಗಿರಿಯ ಬಿಜೆಪಿ ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಸಿಎಂ‌ ಮನೆಗೆ ಮುತ್ತಿಗೆ ಯತ್ನ, ಹಲವರ ಬಂಧನ ಬಿಡುಗಡೆ

ಬೆಂಗಳೂರು ಪ್ರಜಾಕಿರಣ.ಕಾಮ್ :  ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ದಾಖಲೆ ಸಮೇತ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಅವರ ನಿವಾಸದಲ್ಲಿ ಎಂಟು ಕೋಟಿಗೂ ಅಧಿಕ ನಗದು ಸಿಕ್ಕಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಸರಕಾರದ 40% ಕಮಿಷನ್ ದಂಧೆ ಮತ್ತೊಮ್ಮೆ ಬಟಾ ಬಯಲಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕೆಂದು ರಾಜ್ಯದ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ಆಗ್ರಹಿಸಿದ್ದಾರೆ. 

ಶನಿವಾರ ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನೆಗೆ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಬಂಧಿಸಿದರು.

ಈ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಶಾಸಕ ಮಿತ್ರರು, ರಾಜ್ಯ, ಜಿಲ್ಲಾ, ಬ್ಲಾಕ್ ನ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *