ಕ್ರೀಡೆ

ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಬಂಧಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ

ಮಹಿಳಾ ಕುಸ್ತಿಪಟುಗಳ ಬಂಧಿಸಿ ದೌರ್ಜನ್ಯ ಎಸಗಿರುವುದಕ್ಕೆ ದೇಶ ವ್ಯಾಪ್ತಿ ಖಂಡನೆ

ನವದೆಹಲಿ ಪ್ರಜಾಕಿರಣ.ಕಾಮ್ :
ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದಕ್ಕೆ ದೇಶ ವ್ಯಾಪ್ತಿ ಖಂಡನೆ ವ್ಯಕ್ತವಾಗಿದೆ.

ಇದು ಟ್ವಿಟರ್ ಟ್ರೇಂಡಿಗ್ ಆಗಿದ್ದು, ಬಿಜೆಪಿ ವಿರುದ್ದ ವಿಪಕ್ಷಗಳು ಮುಗಿಬಿದ್ದಿವೆ.

ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹ ಕೇಳಿಬಂದಿದೆ.

ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ನರೇಂದ್ರ ಮೋದಿಯವರ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
#WrestlersProtest

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *