ರಾಜ್ಯ

ಸಿಎಂ ಬದಲಾವಣೆ ಕುರಿತು ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಬೆಂಗಳೂರು prajakiran.com : ರಾಜ್ಯದ ರಾಜಕೀಯ ರಂಗದಲ್ಲಿ ಆರಂಭವಾಗಿರುವ ಸಿಎಂ ಬದಲಾವಣೆ ಚರ್ಚೆಗೆ ಸದ್ಯ ಫುಲ್‌ಸ್ಟಾಪ್ ಹಾಕಲು ವರಿಷ್ಠರು ಮುಂದಾಗಿದ್ದಾರೆ.

ಸಿಎಂ‌ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಕೋವಿಡ್ ಸಂಕಷ್ಟ ಕಾಲದಲ್ಲಿ ಸಿಎಂ ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಎಂಬುದು ಕೇವಲ ಊಹಾಪೋಹವಷ್ಟೇ ಎಂದರು.

ಜೂನ್ 17 ಅಥವಾ 18 ರಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಳ್ಳಲಿರುವ ಅರುಣ್ ಸಿಂಗ್, ನಾಯಕತ್ವದ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲಾಗಿದೆ.

ರಾಜ್ಯ ಪ್ರವಾಸದ ವೇಳೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅರುಣ್ ಸಿಂಗ್ ಹೇಳಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *