ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕರೋನಾಗೆ ಮೊದಲ ಪೊಲೀಸ್ ಅಧಿಕಾರಿ ಬಲಿ….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾಕ್ಕೆ 39 ಜನರನ್ನು ಬಲಿ ಪಡೆದಿರುವ ಮಹಾಮಾರಿಯ ಸಾವಿನ ರಣಕೇಕೆ ಮತ್ತೇ ಮುಂದುವರೆದಿದೆ.

ಈ ಬಾರಿ ಕರೋನಾ ಸೇನಾನಿಯನ್ನೇ ಬಲಿ ಪಡೆದಿರುವ ಕ್ರೂರಿ ಕಿಲ್ಲರ್ ಕರೋನಾ ಧಾರವಾಡ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವುದು ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ.

58 ವರ್ಷದ ಎ ಎಸ್ ಐ ಒಬ್ಬರು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕ್ರೂರಿ ಕರೋನಾ ಸಂಕಷ್ಟಕ್ಕೆ ಸಿಲುಕಿ ಜುಲೈ 7ರಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಅವರು ಇಂದು ಜು.15ರಂದು ಬುಧವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಆ ಮೂಲಕ ಕಿಲ್ಲರ್ ಕರೋನಾಗೆ ಜಿಲ್ಲೆಯಲ್ಲಿ ಮೊದಲ ಪೊಲೀಸ್ ಅಧಿಕಾರಿಯೊಬ್ಬರು ಬಲಿಯಾದಂತಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ವಷ್ಟೇ 100 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1259 ಕ್ಕೆ ಏರಿದೆ.

ಈ ಪೈಕಿ ಇದುವರೆಗೆ 467 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ.753 ಪ್ರಕರಣಗಳು ಸಕ್ರಿಯವಾಗಿವೆ. ಈವರೆಗೆ ಚಿಕಿತ್ಸೆ ಫಲಿಸದೆ 39 ಜನ ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 40ಕ್ಕೆ ಏರಿಕೆಯಾದಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *