ರಾಜ್ಯ

ಧಾರವಾಡ : ಮರಳಿ ಮೂಲ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಯಾದ ತವನಪ್ಪ ಅಷ್ಟಗಿ

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ವಿಧಾನ ಸಭಾ ಕ್ಷೇತ್ರ-71ರ ಬಿಜೆಪಿ ಟಿಕೇಟ್ ಸಿಗದೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ತವನಪ್ಪ ಅಷ್ಟಗಿ ಅವರು ಮರಳಿ ತಮ್ಮ ಮೂಲ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ.

ಸವದತ್ತಿ ರಸ್ತೆಯಲ್ಲಿರುವ ತವನಪ್ಪ ಅಷ್ಟಗಿ ಅವರ ನಿವಾಸಕ್ಕೆ ಸೋಮವಾರ ಬೆಳಗ್ಗೆ ಆಗಮಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು.

ಬಳಿಕ ಮಾತನಾಡಿದ ತವನಪ್ಪ ಅಷ್ಟಗಿ, ಬೇಷರತ್ ಆಗಿ ಕಾಂಗ್ರೆಸ್ ಸೇರಿದ್ದು, ನಾಳೆ ನಾಮಪತ್ರ ಹಿಂಪಡೆಯುವುದಾಗಿ ತಿಳಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಇನ್ನು ಕೇವಲ ಒಂದು ದಿನ ಬಾಕಿ ಇರುವಾಗಲೇ ಕೈ ಪಾಳೇಯ ಸೇರಿದ್ದಾರೆ.

ಈ ಹಿಂದೆ ಕೂಡ ಕಾಂಗ್ರೆಸ್ ಪಕ್ಷದಲ್ಲಿದ್ದ ತವನಪ್ಪ ಅಷ್ಟಗಿ ಮತ್ತು ಅವರ ಪತ್ನಿ ಕಸ್ತೂರಿ ತವನಪ್ಪ ಅಷ್ಟಗಿ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದರು.

ಕ್ಷೇತ್ರದಲ್ಲಿ ತಮ್ಮದೇ ಆದ ಬೆಂಬಲಿಗರ ಪಡೆಯನ್ನು ಹೊಂದಿದ್ದಾರೆ. ಅಷ್ಟಗಿಯವರು ಇದೀಗ ಮರಳಿ ಕಾಂಗ್ರೆಸ್ ಕೈ ಹಿಡಿದ್ದಾರೆ.

ಇದರಿಂದಾಗಿ ಮಾಜಿ ಸಚಿವ ವಿನಯ ಕುಲಕರ್ಣಿಗೆ ಧಾರವಾಡ ವಿಧಾನ ಸಭಾ ಕ್ಷೇತ್ರ-71ರಲ್ಲಿ ಆನೆಬಲ ಬಂದಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *