ರಾಜ್ಯ

ಆಶಾ ಕಾರ್ಯಕರ್ತೆ ಮೇಲೆ ಪೊರಕೆಯಿಂದ ಹಲ್ಲೆ ಯತ್ನ  …!

ಮಂಗಳೂರು prajakiran.com : ಆಶಾ ಕಾರ್ಯಕರ್ತೆ ಮೇಲೆ ಪೊರಕೆಯಿಂದ ಹಲ್ಲೆಗೆ ಯತ್ನ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿಯಲ್ಲಿ ನಡೆದಿದೆ.

ಮನೆಯ ಮುಂದೆ ಜನ ಸೇರಿದ್ದನ್ನ ಪ್ರಶ್ನಿಸಿದ್ದಕ್ಕೆ ಆಶಾ ಕಾರ್ಯಕರ್ತೆ ಪುಷ್ಪಲತಾ ಮೇಲೆ ಪೊರಕೆಯಲ್ಲಿ ಹಲ್ಲೆಗೆ ಮುಂದಾಗಿದ್ದಾರೆ ಎಂದು ನೋಂದ ಆಶಾಕಾರ್ಯಕರ್ತೆ ಆರೋಪಿಸಿದ್ದಾರೆ.

ಕುಕ್ಕಿಪಾಡಿಯ ಶ್ರೀಮತಿ ಎಂಬ ಮಹಿಳೆಯಿಂದ ಆಶಾ ಕಾರ್ಯಕರ್ತೆಗೆ ಹಲ್ಲೆ ಯತ್ನ ಮಾಡಲಾಗಿದೆ.  

ಶ್ರೀಮತಿಯ ಪತಿ ವಿಶ್ವನಾಥ ಎಂಬಾತನಿಂದ ಮನೆಯಲ್ಲಿ ಮಂತ್ರವಾದಿ ಕಾರ್ಯ ನಡೆಯುತ್ತಿದೆ. ಹೀಗಾಗಿ ಇವರ ಮನೆಗೆ ಹತ್ತಾರು ಜನರು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ ಸೇರಿದ್ದನ್ನ ಪ್ರಶ್ನಿಸಿದ ಆಶಾ ಕಾರ್ಯಕರ್ತೆ ಪುಷ್ಪಲತಾಗೆ ನಿಂದಿಸಿದ್ದಾರೆ.

ಇದರಿಂದ ಮನನೊಂದ ಪುಷ್ಪಲತಾ ಅವರು ಬಳಿಕ ಕುಕ್ಕಿಪಾಡಿ ಪಂಚಾಯತ್ ಸದಸ್ಯರಾದ ಯೋಗೀಶ್ ಆಚಾರ್ಯ ಎಂಬುವರಿಗೆ ಮಾಹಿತಿ ನೀಡಿದ್ದಾರೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಸದಸ್ಯನ ಮೇಲೂ ಹಲ್ಲೆ ಯತ್ನ ನಡೆದಿದೆ.

ಆಶಾ ಕಾರ್ಯಕರ್ತೆಗೂ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾದ ‌ಮಹಿಳೆ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಬಳಿಕ ಮಾಹಿತಿ ಅರಿತು ಪುಂಜಾಲಕಟ್ಟೆ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಿಸಿ ತಾಕಿಸಿದ್ದಾರೆ.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *