ಧಾರವಾಡ prajakiran.com : ಕೋರೋನಾ ಅಟ್ಟಹಾಸದ ಹಿನ್ನೆಲೆ ಲಾಕ್ ಡೌನ್ ಘೋಷಣೆ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪಪ್ಪಅವರ ಸರ್ಕಾರ ಆಟೋ ರಿಕ್ಷಾ ಚಾಲಕರಿಗೆ 5 ಸಾವಿರ ಪರಿಹಾರ ಧನ ಘೋಷಣೆ ಮಾಡಿದೆ.
ಆದರೆ ಅದು ಈವರೆಗೆ ಸರಿಯಾಗಿ ಯಾರಿಗೂ ದೊರಕಿಲ್ಲ ಎಂದು ಆರೋಪಿಸಿ ಧಾರವಾಡದ ಆಟೋ ರಿಕ್ಷಾ ಚಾಲಕರ ಅಭಿವೃದ್ಧಿ ಸಂಘದ ವತಿಯಿಂದ ಬುಧವಾರ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ಜಿಲ್ಲೆಯಲ್ಲಿ ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಭಾಗದ ಅನೇಕ ಆಟೋ ಚಾಲಕರು ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಈವರೆಗೆ ಕೇವಲ ಶೇಕಡ 20 ರಷ್ಟು ಜನರಿಗೆ ಮಾತ್ರ ಸಿಕ್ಕಿದೆ. ಇದರಿಂದ ಆಟೋ ಚಾಲಕರ ಕುಟುಂಬಗಳು ಬೀದಿಗೆ ಬಂದು ನಿಂತಿವೆ ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.