ರಾಜ್ಯ

ಬಾದಾಮಿ ಪ್ರವಾಹ ಸಂಕಷ್ಟ : ಸಿದ್ದರಾಮಯ್ಯ ಕಡ್ಡಾಯ ವಿಶ್ರಾಂತಿ

ಬೆಂಗಳೂರು prajakiran.com : ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರ ವಿಧಾನ ಸಭಾಕ್ಷೇತ್ರ ಬಾದಾಮಿ ಜನತೆ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆದರೆ ಕರೋನಾ ಸೋಂಕಿನ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಅವರು ಕ್ಷೇತ್ರಕ್ಕೆ ಆಗಮಿಸುವಂತಿಲ್ಲ. ಈ ಕುರಿತು ಸ್ವತಃ ಟ್ವೀಟ್ ಮಾಡಿದ್ದಾರೆ.

ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ, ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ?  ಎಂದು ಗುಡುಗಿದ್ದಾರೆ.

@CMofKarnataka ಬಿ.ಎಸ್. ಯಡಿಯೂರಪ್ಪ ಅವರೇ, ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ. ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ ಎಂದು ಕುಟುಕಿದ್ದಾರೆ.

@BJP4Karnatakaಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ.

ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *