ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಏ. 22ಕ್ಕೆ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಗುರುವಾರಕ್ಕೆ ಮುಂದೂಡಲಾಯಿತು 

ಬುಧವಾರ ಹೈಕೋರ್ಟ್ ನ್ಯಾರ್ಯಮೂರ್ತಿ ಕೆ. ನಟರಾಜನ್ ಅವರ ಎದುರು ಅರ್ಜಿ ವಿಚಾರಣೆಗೆ ಬಂದಿತು.

ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪರ ವಕೀಲ ಶಶಿಕಿರಣ ಶೆಟ್ಟಿ ಅವರ ವಾದಕ್ಕೆ ಸಿಬಿಐ ಪರ ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸೇಟರ್ ಜನರಲ್ ಎಸ್.ವಿ. ರಾಜು
ಅವರು ಸುದೀರ್ಘವಾದ ಪ್ರತಿವಾದ
ಮಂಡಿಸಿದರು.

ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ದ ಸಾಕಷ್ಟು ಗಂಭೀರವಾದ ಆರೋಪಗಳಿರುವುದರಿಂದ ಅವರಿಗೆ ಜಾಮೀನು ನೀಡುವುದು ಬೇಡ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಗಮನ ಸೆಳೆದರು.

ಅಲ್ಲದೆ, ಇನ್ನೂ ಹೆಚ್ಚಿನ ಸಮಯಾವಕಾಶ ಕೋರಿದ್ದರಿಂದ ಮತ್ತೆ ಗುರುವಾರ ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದರು.

ಈ ಹಿನ್ನಲೆಯಲ್ಲಿ ಮುಂದಿನ ವಿಚಾರಣೆಯನ್ನು ನಾಳೆ ಗುರುವಾರ ಎಪ್ರಿಲ್ 22ಕ್ಕೆ ನಡೆಯಲಿದೆ.

ಈ ಹಿಂದೆ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾಗ ಕೆ. ನಟರಾಜನ್ ಅವರು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು.

ಇದೀಗ ಸಿಬಿಐ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಮತ್ತೆ ಅವರ ಎದುರು ಜಾಮೀನು ಅರ್ಜಿ ವಿಚಾರಣೆಗೆ ಬಂದಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಈಗಾಗಲೇ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ, ಧಾರವಾಡ ಹೈಕೋರ್ಟ್ ಮತ್ತು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *