ಅಂತಾರಾಷ್ಟ್ರೀಯ

ಪಾಕಿಸ್ತಾನ ಜಿಂದಾಬಾದ್ ಎಂದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಷರತ್ತು ಬದ್ದ ಜಾಮೀನು

ಹುಬ್ಬಳ್ಳಿ prajakiran.com  : ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಕೊನೆಗೂ  ಷರತ್ತು ಬದ್ದ ಜಾಮೀನು ಮಂಜೂರು ಆಗಿದೆ.

ಹುಬ್ಬಳ್ಳಿಯ 2ನೇ ಜೆಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.

ಇವರು ಜಿಲ್ಲೆಯನ್ನು ಬಿಟ್ಟು ಹೋಗಬಾರದು. ಸಾಕ್ಷ್ಯವನ್ನು ನಾಶಪಡಿಸಬಾರದು ಎಂಬುದು ಸೇರಿದಂತೆ ಹಲವು ಷರತ್ತು ವಿಧಿಸಲಾಗಿದೆ.

ಹುಬ್ಬಳ್ಳಿಯ ಕೆ ಎಲ್ ಇ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿ ಓದುತ್ತಿರುವ ವಿದ್ಯಾರ್ಥಿಗಳಾದ ಜಮ್ಮು ಕಾಶ್ಮೀರದ ಬಾಸಿತ್ ಸೋಫಿ (19),ಅಮೀರ ಮೊಯಿನೋದ್ದೀನ್ (21), ತಾಲಿಬ್ ವಾನಿ (19) ಜಾಮೀನು ಪಡೆದಿದ್ದಾರೆ.

ಆರೋಪಿತರ ಪರವಾಗಿ ಬೆಂಗಳೂರಿನ ವಕೀಲರಾದ ಗಂಗಾಧರಯ್ಯ ಹಾಗೂ ತಂಡ ಜೂನ್ 4ರಂದು ಅರ್ಜಿ ಸಲ್ಲಿಸಿದ್ದರು. ಜೂನ್ 6ರಂದೇ ಜಾಮೀನು ಮಂಜೂರು ಆಗಿದೆ.



ಘಟನೆ ವಿವರ :

ಇವರು ಹುಬ್ಬಳ್ಳಿಯ ಹೊರವಲಯದಲ್ಲಿರುವ ಕೊಟಗುಂಡಹುಣಸಿ ಗ್ರಾಮದ ಹಾಸ್ಟೆಲ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು.

ಈ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಗೋಕುಲ್ ಠಾಣೆಯ ಪೊಲೀಸರು ಈ ಮೂವರನ್ನು ಫೆ 15ರಂದು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು.  

ಆನಂತರ ಹುಬ್ಬಳ್ಳಿ-ಧಾರವಾಡ ಪೊಲೀಸ ಆಯುಕ್ತರು ಇವರನ್ನು ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆಗೊಳಿಸಿದ್ದರು. ಇದರಿಂದ ರೊಚ್ಚಿಗೆದ್ದ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಆನಂತರ ಅವರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಿದ್ದರು. ಆನಂತರ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು.

ಈ ಘಟನೆ ನಡೆದ ಸ್ಥಳ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿದು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿತ್ತು.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *