ಧಾರವಾಡ prajakiran.com: ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಅತ್ಯಾಚಾರವೆಸಗುವ ಅಪರಾಧಿಗಳ ವಿರುದ್ದ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ರಾಮ್ ಸೇನಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದತೆ, ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಎಂದು ಒತ್ತಾಯಿಸಿದರು.
ಅತ್ಯಾಚಾರ ನಡೆಸಿದ ಆರೋಪಿಗಳ ಸಂಪೂರ್ಣ ಆಸ್ತಿಯನ್ನು ಅತ್ಯಾಚಾರಕ್ಕೊಳಗಾದ ಮಹಿಳೆಯರ ಕುಟುಂಬಸ್ಥರಿಗೆ ಸೇರುವ ಹಾಗೆ ಕಾನೂನು ಜಾರಿಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಉಳವಿ ಚಿನ್ಮಯ ಜ್ಞಾನಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ, ರಾಮ ಸೇನೆ ಜಿಲ್ಲಾಧ್ಯಕ್ಷ ವಿಜಯ ಕದಂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.