ಬೆಂಗಳೂರು prajakiran.com : ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜೆ. ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಆ. 18 ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144ರಕಲಂ ಅನ್ವಯ ನಿಷೇಧಾಜ್ಞೆ ಮುಂದುವರೆಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ಮುಂಜಾಗ್ರತ ಕ್ರಮವಾಗಿ ಘಟನಾ ಸ್ಥಳಕ್ಕೆ ಡಿಸಿಪಿ ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬಂಧಿತ ನವೀನ್ ಮನೆ ಬಳಿ ಭದ್ರತೆ ಪರಿಶೀಲನೆ ನಡೆಸಿದರು.
ಬಳಿಕ ಕಾವಲ್ ಭೈರಸಂದ್ರಕ್ಕೆ ಡಿಸಿಪಿ ಭೇಟಿ ನೀಡಿ ಆರಂಭಗೊಂಡಿದ್ದಕೆಲಅಂಗಡಿಗಳನ್ನು ಬಂದ್ ಮಾಡಿಸಿದರು.
ನಿಷೇಧಾಜ್ಞೆ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ ಪಂತ್ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ, ಕಾವಲ್ ಭೈರಸಂದ್ರ ಪ್ರದೇಶದಲ್ಲಿ ಪೊಲೀಸ್ ಕಟ್ಟೆಚ್ಚರ ಮುಂದುವರೆಸಲಾಗಿದೆ.
ಪೋಷಕರ ಗಲಾಟೆ :
ಬೆಂಗಳೂರಿನ ಡಿ.ಜೆ ಹಳ್ಳಿ ಹಾಗೂ ಕೆ.ಜೆ ಹಳ್ಳಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಲಾಗಿದೆ ಎಂದು ಪೋಷಕರು ಗಲಾಟೆ ನಡೆಸಿದ ಘಟನೆ ಭಾನುವಾರ ನಡೆದಿದೆ.
ಶನಿವಾರ ರಾತ್ರಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಮತ್ತೆ 57 ಜನರ ಬಂಧನ ಮಾಡಿದ್ದರು.
ಈ ಹಿನ್ನಲೆಯಲ್ಲಿ ನಮ್ಮ ಮಕ್ಕಳು ಗಲಾಟೆಯಲ್ಲಿ ಭಾಗಿಯಾಗಿರಲಿಲ್ಲ. ಆದರೆ ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು.