ರಾಜ್ಯ

ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ 

ಬಂಟ್ವಾಳ prajakiran.com : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ವತಿಯಿಂದ ನಶಾ  ಮುಕ್ತ ಭಾರತಕ್ಕಾಗಿ ಎಬಿವಿಪಿ ವತಿಯಿಂದ ಸಂಕಲ್ಪ ಸಹಿ ಸಂಗ್ರಹ ಅಭಿಯಾನ  ನಡೆಯಿತು.

ರಾಷ್ಟ್ರವ್ಯಾಪಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಾಗಬೇಕೆಂದು ಒತ್ತಾಯಿಸಿ ಈ ಸಹಿ ಸಂಗ್ರಹ ಅಭಿಯಾನವನ್ನು ಬಂಟ್ವಾಳ ಮಿನಿ ವಿಧಾನಸೌದ ಮುಂಭಾಗದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ  ಬಂಟ್ವಾಳದ  ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹಾಗೂ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಎಸ್ .ಆರ್ ಸಹಿ ಹಾಕುವುದರ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿ ಪಂ ಸದ್ಯಸ ರವೀಂದ್ರ ಕಂಬಳಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ತಾಲೂಕು ಕಚೇರಿಗೆ ಆಗಮಿಸಿದ ಸಾರ್ವಜನಿಕರು ತಮ್ಮ ಸಹಿ ಹಾಕುವ ಮೂಲಕ ಬೆಂಬಲ ಸೂಚಿಸಿದರು.

ಸಂದರ್ಭದಲ್ಲಿ .ಭಾ.ವಿ. ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ,ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು ,ಹರ್ಷಿತ್ ಕೊಯಿಲ ಅಖಿಲಾಷ್, ದಿನೇಶ್ ಕೊಯಿಲ, ನಿಶ್ಚಿತ್ ಬಂಟ್ವಾಳ್. ಹಿರಿಯ ಕಾರ್ಯಕರ್ತರಾದ ಪ್ರಣಮ್ ರಾಜ್ ಅಜ್ಜಿಬೆಟ್ಟು,ಮನೀಷ್ ರಾಯಿ  ಮುಂತಾದ ಪ್ರಮುಖರು ಉಪಸ್ಥಿತರಿದ್ದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *