ಜಿಲ್ಲೆ ರಾಜ್ಯ

ಯತ್ನಾಳ ಬಗ್ಗೆ ಉತ್ತರಿಸಲು ಸಚಿವ ಜಗದೀಶ್ ಶೆಟ್ಟರ್ ಹಿಂದೇಟು

ಧಾರವಾಡ Prajakiran.com : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಲು ಸಚಿವ ಜಗದೀಶ್ ಶೆಟ್ಟರ್ ಹಿಂದೇಟು ಹಾಕಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ನನಗೆ ಏನು ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಅವರು ರಾಷ್ಟ್ರದ ರಾಜಧಾನಿ ನವದೆಹಲಿಗೆ ಏಕೆ ಹೋಗಿದ್ದಾರೆ ಎಂಬುದು ನನಗೆ ತಿಳಿದಿಲ್ಲ  ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬಗ್ಗೆ ಸಚಿವ ಜಗದೀಶ್ ಶೆಟ್ಟರ್  ಹೆಚ್ಚಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ದೆಹಲಿಗೆ ಏಕೆ ಹೋಗಿದ್ದಾರೋ ಗೊತ್ತಿಲ್ಲ.

ಅವರು ಯಾವ ಒತ್ತಡಕ್ಕೂ ಮಣಿಯೋದಿಲ್ಲ ಎನ್ನುವುದು ಅವರ ಅಭಿಪ್ರಾಯ.

ಅದರ ಬಗ್ಗೆ ನಾನು ಹೆಚ್ಚಿಗೆ ಮಾತನಾಡೋದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಜಾರಿಕೊಂಡರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *