ಆಧ್ಯಾತ್ಮ

ಲಾರಿಗಳಲ್ಲಿದ್ದ ಬ್ಯಾಟರಿ ಕಳ್ಳತನ ಮಾಡಿದ್ದ ಆರೋಪಿ ಬಂಧಿಸಿದ ಪೊಲೀಸರು….!

ಮಂಗಳೂರು prajakiran.com :
ಲಾರಿಗಳಲ್ಲಿದ್ದ ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಇರ್ಫಾನ್ ಎಂದು ಗುರುತಿಸಲಾಗಿದೆ.

ಈತ ಮಂಗಳೂರಿನ ಪಣಂಬೂರಿ ನಲ್ಲಿರುವ ಎನ್ಎಂಪಿಟಿ ಟಿಂಬರ್ ಯಾರ್ಡ್ ನಲ್ಲಿ ಪಾರ್ಕ್ ಮಾಡಿದ್ದ ಸುಮಾರು 5 ಲಾರಿಗಳಲ್ಲಿದ್ದ ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದ.

ಈ ಕುರಿತು ಲಾರಿ ಮಾಲೀಕ ಪೊಲೀಸ್ ದೂರನ್ನು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪಣಂಬೂರು
ಠಾಣಾ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯಿಂದ 5 ಲಾರಿಗಳ ಬ್ಯಾಟರಿಗಳನ್ನು, ಕೃತ್ಯಕ್ಕೆ ಬಳಸಲು ಉಪಯೋಗಿಸಿದ ಸ್ಕೂಟರ್ ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಮೌಲ್ಯ ಸುಮಾರು 85000 ರೂಪಾಯಿ ಆಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *