ರಾಜ್ಯ

ಹಂದಿಗಳ ಗೂಡಾಗುತ್ತಿರುವ ಬೆಂಗಳೂರು ನಗರ : ಮಾರ್ಷಲ್‌ಗಳನ್ನು ಮೂಲ ಕರ್ತವ್ಯಕ್ಕೆ ನಿಯೋಜಿಸಿ

ಬೆಂಗಳೂರು prajakiran.com : ಬೆಂಗಳೂರು ನಗರದಲ್ಲಿ ಕಸದ ಬ್ಲಾಕ್ ಸ್ಪಾಟ್‌ಗಳು ಹೆಚ್ಚುತ್ತಿದ್ದು, ಬಿಬಿಎಂಪಿ ನೇಮಕ ಮಾಡಿಕೊಂಡಿರುವ ಮಾರ್ಷಲ್‌ಗಳನ್ನು ಮೂಲ ಕರ್ತವ್ಯಕ್ಕೆ ಮರು ನಿಯೋಜಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಮುಖಂಡರಾದ ಜನನಿ ಭರತ್ ಆಗ್ರಹಿಸಿದರು. 

ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಾರ್ಷಲ್‌ಗಳನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿದ್ದು ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಹಿಡಿದು ದಂಡ ವಿಧಿಸಲು ಹಾಗೂ ಬ್ಲಾಕ್ ಸ್ಪಾಟ್‌ಗಳು ಹೆಚ್ಚಾಗದಂತೆ ನಿಗಾವಹಿಸುವ ಸಲುವಾಗಿ ಆದರೆ, ಬಿಬಿಎಂಪಿ ಈ ಕೆಲಸದಿಂದ ಇವರನ್ನು ವಿಮುಖರನ್ನಾಗಿ ಮಾಡಿ ಜನರ ಸುಲಿಗೆಗೆ ಇಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಮ್ ಆದ್ಮಿ ಪಕ್ಷ ನಡೆಸಿದ ಸರ್ವೇಕ್ಷಣೆ ಪ್ರಕಾರ ನಗರದಲ್ಲಿ ಸುಮಾರು 1038 ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್ (ಕಸದ ರಾಶಿಗಳು) ಕಂಡು ಬಂದಿವೆ. 

ಇದರಿಂದ ಸೊಳ್ಳೆ, ಹಂದಿ, ಬೀದಿ ನಾಯಿಗಳ ಕಾಟ ವಿಪರೀತವಾಗಿದೆ, ಕಸದ ಮಾಫಿಯಾ ಜತೆ ಕೈ ಜೋಡಿಸಿರುವ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಿ, ಅದನ್ನು ಬಿಟ್ಟು ಜನರನ್ನು ದೋಚುವುದುಲ್ಲ  ಎಂದು ವ್ಯಂಗ್ಯವಾಡಿದರು.

ಕಸದ ಮಾಫಿಯಾ ಜತೆ ಕೈ ಜೋಡಿಸಿರುವ ಸರ್ಕಾರ ಹಾಗೂ ಬಿಬಿಎಂಪಿ 198 ಪ್ಯಾಕೇಜ್‌ಳನ್ನು 89 ಇಳಿಸಿರುವ ಕಾರಣ ಕಸ ಸಂಗ್ರಹ ವ್ಯತ್ಯಯವಾಗಿ ಬ್ಲಾಕ್ ಸ್ಪಾಟ್‌ಗಳು ಹೆಚ್ಚುತ್ತಿವೆ. 

ಈಗಾಗಲೇ ನಗರದಲ್ಲಿ ಡೆಂಗ್ಯೂ, ಚಿಕುನ್‌ಗುನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕಸದ ರಾಶಿಗಳಿಂದ ಸೊಳ್ಳೆ ಉತ್ಪತ್ತಿಯಾಗಿ ಜನ ರೋಗದಿಂದ ನರಳುವಂತೆ ಮಾಡುವುದು ಬಿಬಿಎಂಪಿ ಉದ್ದೇಶವೇ?

ಆಯುಕ್ತ ಮಂಜುನಾಥ್ ಪ್ರಸಾದ್, ಆಡಳಿತಾಧಿಕಾರಿ ಗೌರವ್ ಗುಪ್ತ ಅವರು ಉತ್ತರಿಸಬೇಕು, ಪ್ರತಿ ಮನೆ, ಮನೆಯಿಂದ ಕಸ ಸಂಗ್ರಹಕ್ಕೆ ಎಂದು ₹600 ರಷ್ಟು ಏಕೆ ಸೆಸ್ ಸಂಗ್ರಹ ಸಂಗ್ರಹಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಿ ಎಂದರು.

ಮಾಧ್ಯಮ ಸಂಯೋಜಕ ಸೋಮಶೇಖರ್ ಮಾತನಾಡಿ, ವಾರ್ಡ್ ಮಟ್ಟದಲ್ಲಿ ನೇಮಕ ಮಾಡಿರುವ ನೋಡಲ್ ಅಧಿಕಾರಿಗಳು ಸಹ ಸರಿಯಾಗಿ ಸ್ಪಂದಿಸುತ್ತಿಲ್ಲ.

ಕರೆ ಮಾಡಿದರೆ ಸ್ವೀಕರಿಸಿದೆ ವಾಟ್ಸ್‌ಆ್ಯಪ್ ಮೂಲಕ ಬ್ಲಾಕ್ ಸ್ಪಾಟ್‌ಗಳ ಫೋಟೋ ಕಳಿಸಿ ಎಂದು ಹೇಳಿ ಆನಂತರ ಸಮರ್ಪಕವಾಗಿ ಉತ್ತರಿಸುತ್ತಿಲ್ಲ ಎಂದು ದೂರಿದರು.

ಕಸದ ರಾಶಿಗಳು ಎಲ್ಲೆಂದರಲ್ಲಿ ಹೆಚ್ಚಾಗುತ್ತಿರುವ ಕಾರಣ ಹಂದಿಗಳ ಸಂಖ್ಯೆಯೂ ಇದ್ದಕ್ಕಿದ್ದಂತೆ ವಿಪರೀತವಾಗಿದೆ, ಬೀಡಾಡಿ ದನಗಳ ಸಂಖ್ಯೆಯೂ ಹೆಚ್ಚಳವಾಗಿದ್ದು ರಸ್ತೆಯಲ್ಲಿ ಸಂಚರಿಸುವುದೇ ದುಸ್ತರವಾಗಿದೆ ಎಂದರು. 

ಮೂಲ ಕರ್ತವ್ಯದಿಂದ ವಿಮುಖರನ್ನಾಗಿಸಿ ಸಾರ್ವಜನಿಕರ ಸುಲಿಗೆಗೆ ನೇಮಿಸಿರುವ ಮಾರ್ಷಲ್‌ಗಳನ್ನು  ಕೂಡಲೇ ಮೂಲ ಕರ್ತವ್ಯಕ್ಕೆ ಮರಳಿಸಬೇಕು ಎಂದು ಹೇಳಿದರು.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *