ರಾಜ್ಯ

ಬೆಳಗಾವಿ ಬಳಿ ಸಂಭವಿಸಿದ ರಸ್ತೆ ಅಪಘಾತ : ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಳಗಾವಿ prajakiran. com ಜೂನ್ 26 :

ಬೆಳಗಾವಿಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷಗಳ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗವಾವಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿರುವುದುಅತ್ಯಂತ ದು:ಖಕರ ಸಂಗತಿ. ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆಯ ವ್ಯವಸ್ಥೆ ಪೂರೈಸಲು ಈಗಾಗಲೇ ಸೂಚನೆ ನೀಡಲಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ.

ಗಾಯಗೊಂಡವರಿಗೆ ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ಕಾರ್ಮಿಕ ಇಲಾಖೆಯಿಂದ ಹೆಚ್ಚುವರಿ 5 ಲಕ್ಷ ರೂ. ಪರಿಹಾರ :

ಅಪಘಾತಕ್ಕೆ ಒಳಗಾದವರಲ್ಲಿ 5 ಜನ ಕಾರ್ಮಿಕರಿದ್ದು, ಅವರಿಗೆ ಕಾರ್ಮಿಕ ಇಲಾಖೆಯಿಂದ ಹೆಚ್ಚುವರಿಯಾಗಿ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು.

ಭ್ರೂಣ ಹತ್ಯೆ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ :

ಬೆಳಗಾವಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಭ್ರೂಣಹತ್ಯೆ ಗಂಭೀರವಾದ ವಿಷಯವಾಗಿದೆ. ಕೃತ್ಯ ನಡೆದಿರುವ ಆಸ್ಪತ್ರೆಯ ಮಾಹಿತಿ ಈಗಾಗಲೇ ದೊರೆತಿದೆ.

ಜಿಲ್ಲಾಧಿಕಾರಿಗಳು ಆಸ್ಪತ್ರೆಯ ಮೇಲೆ ಕ್ರಮ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಂಪೂರ್ಣ ತನಿಖೆ ಮಾಡಲು ಆದೇಶ ನೀಡಲಾಗಿದೆ.

ಈ ಪ್ರಕರಣದಲ್ಲಿ ಶಾಮೀಲಾಗಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *