ಅಂತಾರಾಷ್ಟ್ರೀಯ

ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಗುವ ವಿಶ್ವಾಸ : ಮುತಾಲಿಕ್

ಹುಬ್ಬಳ್ಳಿ prajakiran.com: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿಯಾಗಿದ್ದೇನೆ.

ಟಿಕೆಟ್ ವಿಚಾರ ಹಿನ್ನೆಲೆ ನಾನು ಬಿಜೆಪಿ ಎಲ್ಲಾ ಪ್ರಮುಖರನ್ನು ಭೇಟಿ ಮಾಡಿದ್ದೇನೆ.

ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ‌ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ನಗರದಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮಾತನಾಡಿದ್ದೇನೆ.

ಎಲ್ಲರೂ ಸಹ ಕೋರ್ ಕಮೀಟಿ ಜೊತೆ ಚರ್ಚಿಸುವುದಾಗಿ ಹೇಳಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶೇಕಡಾ 90% ನನಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ರಾಜಕೀಯ ಬೆಳವಣಿಗೆ ಆಗಬಹುದು.

ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ. ಯಾರಿಗೆ ಟಿಕೆಟ್ ಸಿಗುತ್ತದೆ ಅವರ ಪರವಾಗಿ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದು ಅವರು ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *