ಧಾರವಾಡ prajakiran.com : ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ. ಹಿರೇಮಠ ಅವರನ್ನು ಬೆಂಗಳೂರಿನ ಕೆ ಆರ್ ಐಡಿ ಎಲ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ವರ್ಗಾವಣೆ ಮಾಡಲಾಗಿದೆ.
ಅವರು ಈ ಹಿಂದೆ ಹುಬ್ಬಳ್ಳಿಯ ಕೈ ಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಅದೇ ರೀತಿ ಅನೇಕ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯದ ಬಿಜೆಪಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.