ರಾಜ್ಯ

ಬೆಳಗಾವಿ ಜಿಲ್ಲೆ ವಿಭಜನೆ ಬೇಡಿಕೆ : ಜಿಲ್ಲೆಯ ಹಿತಕ್ಕೆ ಅನುಸಾರವಾಗಿ ಕ್ರಮ ಎಂದ ಮುಖ್ಯಮಂತ್ರಿ

ಬೆಳಗಾವಿ prajakiran. com, ಏ 28: ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯ ಹಿತರಕ್ಷಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳಲಾಗುವುದು. ಅದರ ಜತೆ ಜಿಲ್ಲೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಳಗಾವಿ ಜಿಲ್ಲೆಯ ವಿಭಜನೆಗೆ ಹಲವಾರು ವರ್ಷಗಳಿಂದ ಬೇಡಿಕೆ ಇದೆ. ಬೇರೆ ಎಲ್ಲಾ ಜಿಲ್ಲೆಗಳು ಆದಾಗಲೂ ಬೆಳಗಾವಿ ಜಿಲ್ಲೆ ಆಗಬೇಕು ಎನ್ನುವ ಸಲಹೆ ಬೇಡಿಕೆ ಬಂದಿತ್ತು.

ಅವತ್ತಿನ ಸಂದರ್ಭದಲ್ಲಿ ಜೆ.ಹೆಚ್.ಪಟೇಲರು ಮುಖ್ಯಮಂತ್ರಿಗಳಾಗಿದ್ದಾಗಲೂ ಚರ್ಚೆಯಾಗಿತ್ತು. ಬೆಳಗಾವಿ ಗಡಿ ಜಿಲ್ಲೆಯಾದ್ದರಿಂದ ಸದ್ಯಕ್ಕೆ ಬೇಡ ಎಂಬ ನಿರ್ಧಾರ ಮಾಡಲಾಗಿತ್ತು.

ಈಗ ಮತ್ತೆ ಜನರು ಅದರ ಬಗ್ಗೆ ಒತ್ತಾಸೆ ವ್ಯಕ್ತಪಡಿಸುತ್ತಿದ್ದಾರೆ. ಅವನ್ನೆಲ್ಲಾ ಗಮನಿಸಿ ಜಿಲ್ಲೆಯ ಹಿತದೃಷ್ಟಿಯಿಂದ ಏನು ಬೇಕೋ ಅದನ್ನು ಮಾಡಲಾಗುವುದು ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *