ಅಂತಾರಾಷ್ಟ್ರೀಯ

ಬೆಳಗಾವಿಯಲ್ಲಿನ ಪುಂಡಾಟಿಕೆ ಖಂಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಹುಬ್ಬಳ್ಳಿ prajakiran.com ಡಿ. 18: ಬೆಳಗಾವಿಯಲ್ಲಿ ನಿನ್ನೆ ರಾತ್ರಿ ನಡೆದ ಪುಂಡಾಟಿಕೆಯನ್ನು ಖಂಡಿಸುತ್ತೇನೆ. ಆ ಪುಂಡರನ್ನು ಸೆದೆ ಬಡಿಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅವರೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ಮಾಡುವುದು , ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು ಕಾನೂನು ಬಾಹಿರ.

ಇಂಥ ಘಟನೆ ಪುನಃ ಜರುಗದಂತೆ ಇನ್ನಷ್ಟು ಕಠಿಣ ಹಾಗೂ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರವೃತ್ತಿ ಸರಿಯಲ್ಲ ಎಂದರು.

ರಾಷ್ಟ್ರಭಕ್ತರ ಪ್ರತಿಮೆ ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ದೇಶಭಕ್ತರು ಎಲ್ಲಾ ಸಮುದಾಯಕ್ಕೆ ಸೇರಿದವರು.

ದೇಶಕ್ಕಾಗಿ ತ್ಯಾಗ ಮಾಡಿದವರು. ಪ್ರತಿಮೆ ಸ್ಥಾಪಿಸುವುದು ಅವರನ್ನು ಗೌರವಿಸಬೇಕೆಂದೇ ವಿನಃ ಅವರ ಮುಖಾಂತರ ಸಮಾಜದಲ್ಲಿ ಕ್ಷೋಭೇ ಉಂಟುಮಾಡುವುದಲ್ಲ.

ಈ ವರ್ತನೆ ಎಳ್ಳಷ್ಟೂ ಸರಿಯಲ್ಲ. ಕೆಲವು ಪುಂಡರು ಈ ರೀತಿ ಮಾಡುತ್ತಿದ್ದು ಅವರನ್ನು ಸದೆ ಬಡಿಯಲಾವುದು. ಇದು ಉದ್ದೇಶಪೂರ್ವಕವೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *