ಜಿಲ್ಲೆ

ಧಾರವಾಡದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದಗೆ ಪುತ್ರಿ ವಿಯೋಗ

ಧಾರವಾಡ prajakiran. com :  ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರ ಹಿರಿಯ ಮಗಳಾದ ಲಿ. ಕರ್ನಲ್ ಮಂಜುನಾಥ ಮೂಗಿ ಇವರ ಧರ್ಮಪತ್ನಿ ನಂದಾ ಮೂಗಿ( ಬೆಲ್ಲದ) ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನ ಹೊಂದಿದರು.

ಮೃತರ ಪಾರ್ಥಿವ ಶರೀರವನ್ನು ಧಾರವಾಡದ ಚಂದ್ರಕಾಂತ ಬೆಲ್ಲದ ಅವರ ಮನೆ ಗೌರಿ ಕೃಪಾ ಮರಾಠಾ ಕಾಲನಿ ರಸ್ತೆ ಯಲ್ಲಿ‌ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಅಂತಿಮ ಯಾತ್ರೆ ಇಂದು ಆ. 4ರಂದು ಮಧ್ಯಾಹ್ನ 12 ಗಂಟೆಗೆ ಹೊರಟು, ಹೊಸಾಯಲ್ಲಾಪುರದ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ಕ್ರಿಯೆ ನಡೆಸಲಾಗುವದು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅವರು ಸಹೋದರ ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *