ಧಾರವಾಡ prajakiran.com : ನನ್ನ ದೆಹಲಿ ಭೇಟಿ ರಾಜಕೀಯ ಉದ್ದೇಶದಿಂದ ಕೂಡಿಲ್ಲ.
ನಾನು ನಮ್ಮ ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಂದಿದ್ದೇನೆ ಎಂದು ಧಾರವಾಡದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸ್ಪಷ್ಟ ಪಡಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ ಎಂದು ಹೇಳಿದರು.
ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಆದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ ಎಂದರು.
ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ ಎಂದರು.
ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ವಿವರಿಸಿದರು.