ಬೆಂಗಳೂರು prajakiran.com : ರಾಜ್ಯದ ಬಿಜೆಪಿ ಸರಕಾರದ ವಿರುದ್ಧ ಬಹಿರಂಗವಾಗಿ ಸಮರ ಸಾರುವ ಮೂಲಕ ವಿಪಕ್ಷಗಳಿಗೆ ಆಹಾರವಾಗುವ ಜೊತೆಗೆ ಸ್ವ ಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾದ ಧಾರವಾಡ ಜಿಲ್ಲೆಯ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಟೆಲಿಫೋನ್ ಕದ್ದಾಲಿಕೆ ಪ್ರಕರಣದ ಕುರಿತು ನಡೆಯುತ್ತಿದೆ.
ಆ ತನಿಖೆಯಿಂದ ಹಿಂದೆ ಸರಿಯದಿರಲು ನಿರ್ಧರಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಫೋನ್ ಟ್ಯಾಪ್ ಆಗಿರುವುದರ ಬಗ್ಗೆ ಗೃಹ ಇಲಾಖೆಗೆ ಸಲ್ಲಿಸಿದ್ದ ದೂರಿನನ್ವಯ ತನಿಖೆ ನಡೆಯುತ್ತಿದ್ದು, ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ.
ಆದರೆ,ಕೆಲವು ಮಾಧ್ಯಮಗಳಲ್ಲಿ ನಾನು ದೂರು ಹಿಂಪಡೆಯುತ್ತಿದ್ದೇನೆ ಎಂಬ ಸುದ್ದಿಗಳು ಪ್ರಕಟವಾಗುತ್ತಿರುವುದು ಗಮನಿಸಿದ್ದೇನೆ.
ಅದು ಸತ್ಯಕ್ಕೆ ದೂರವಾದದ್ದು. ಸಂಪೂರ್ಣ ತನಿಖೆಯಾಗಿ ಸತ್ಯ ಹೊರಬರಬೇಕಿದೆ ಎಂದು ಹೇಳಿದ್ದಾರೆ.
ನಾನು ದೂರು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬೆಲ್ಲದ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೀಗಾಗಿ ಈ ಪ್ರಕರಣ ಮತ್ಯಾವ ತಿರುವು ಪಡೆಯುತ್ತದೆ ಎಂಬುದು ಕಾದು ನೋಡಬೇಕು.