ಉಡುಪಿ prajakiran.com : ಖ್ಯಾತ ವೈಚಾರಿಕ ಸಾಹಿತಿ ಉಡುಪಿಯ ಡಾ.ಜಿ.ಭಾಸ್ಕರ್ ಮಯ್ಯ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಭಾಸ್ಕರ್ ಮಯ್ಯಾ (70) ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಕಳೆದ 4 ದಿನಗಳಿಂದ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಪ್ರಣವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ 4:30ರ ಹೊತ್ತಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ವೈಚಾರಿಕ ಕೃತಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ವೈಚಾರಿಕ ಹಾಗೂ ಪ್ರಗತಿಪರ ಸಾಹಿತ್ಯದಲ್ಲಿ 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದಾರೆ.