ಅಂತಾರಾಷ್ಟ್ರೀಯ

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೊನಾ ಪಾಸಿಟಿವ್





ಮುಂಬೈ prajakiran.com : ಹಿಂದಿ ಚಿತ್ರರಂಗದ ಸುಪರ್ ಸ್ಟಾರ್ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಅವರು ಮುಂಬೈನ ಪ್ರತಿಷ್ಠಿತ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಕೋವಿಡ್ 19 ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಅಲ್ಲದೆ, ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ರೋಗಿಗಳ ಪ್ರಾಣ ಉಳಿಸಲು ಹೋರಾಡುತ್ತಿರುವುದನ್ನು ದೇವರಿಗೆ ಹೋಲಿಸಿ ಶ್ಲಾಘಿಸಿದ್ದಾರೆ.



ಈ ಕುರಿತು ಟ್ವೀಟ್ ಮಾಡಿರುವ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ  ಟ್ವೀಟ್ ವಿವರ ಹೀಗಿದೆ. 

T 3590 -I have tested CoviD positive .. shifted to Hospital .. hospital informing authorities .. family and staff undergone tests , results awaited .. All that have been in close proximity to me in the last 10 days are requested to please get themselves tested !

ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಇಡೀ ದೇಶದ ಜನತೆ ಹಾಗೂ ನಟ, ನಟಿಯರು ಬೇಗ ಗುಣಮುಖರಾಗಿ ಮರಳಿ ಎಂದು ಪ್ರಾರ್ಥಿಸಿ, ಟ್ವೀಟ್ ಮಾಡಿದ್ದಾರೆ.

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದಷ್ಟು ಬೇಗನೆ ಗುಣಮುಖರಾಗಿ ಬರಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.



ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಆರೋಗ್ಯದಲ್ಲಿ ಏರುಪೆರಾಗಿದ್ದು, ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರೀಕ್ಷೆಯಲ್ಲಿ ಕೋವಿಡ್-19 ಪಾಸಿಟಿವ್ ಎಂದು ವೈದ್ಯರು ದೃಢಪಡಿಸಿದ್ದಾರೆ.ಅವರು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಹೀಗೆ ಲಕ್ಷಾಂತರ ಟ್ವೀಟ್ ಗಳ ಸುರಿಮಳೆಯಾಗಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *