ಸಿನಿಮಾ

ಮತ್ತೆ ಬಿಗ್ ಬಾಸ್ ಪುನರ್ ಆರಂಭ : ಪರಮೇಶ್ವರ್ ಗುಂಡ್ಕಲ್

ಬೆಂಗಳೂರು prajakiran.com: ಕೋವಿಡ್ ಎರಡನೇ ಅಲೆಯ ಲಾಕ್‌ಡೌನ್ ನಿಂದಾಗಿ ಅರ್ಧಕ್ಕೆ ನಿಂತುಹೋಗಿದ್ದ ಕನ್ನಡದ ಬಿಗ್‌ಬಾಸ್ ಶೋ ಇದೀಗ ಪುನಾರಂಭಗೊಳ್ಳುತ್ತಿದೆ.

ಈ ಬಗ್ಗೆ ಕಲರ್ಸ್​ ಕನ್ನಡದ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ.

“ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.

ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ,

ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್‍ ಕಾರ್ಡ್ ಎಲ್ಲರಿಗೂ ಗೊತ್ತು.

ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು..

ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು.

ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ.

ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.

ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ.

ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ ಎಂದು ಪರಮೇಶ್ವರ್​ ಗುಂಡ್ಕಲ್​ ಬರೆದುಕೊಂಡಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *