ಧಾರವಾಡ ಪ್ರಜಾಕಿರಣ.ಕಾಮ್ : ಬೈಕ್ ಮೇಲೆ ಹೋಗುತ್ತಿದ್ದ ದಂಪತಿಗಳ ವಾಹನಕ್ಕೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಾಯಿ-ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಸಂಜೆ ನಡೆದಿದೆ.
ಧಾರವಾಡದಿಂದ ಬೆಳಗಾವಿ ಕಡೆಗೆ ಹೊರಟಿದ್ದ ಬೈಕ್ ಗೆ ಧಾರವಾಡದ ಬೇಲೂರು ಬಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಾಯಿ ಹಾಗೂ ಒಂದು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಚಾಲನೆ ಮಾಡುತ್ತಿದ್ದ ತಂದೆಗೆ ಅಲ್ಪಸ್ವಲ್ಪ ಗಾಯಗಳಾಗಿವೆ.
ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಗರಗ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲು ಮಾಡಿಕೊಂಡು ಅಪಘಾತ ಮಾಡಿ ಪರಾರಿಯಾದ ವಾಹನದ ಪತ್ತೆಗೆ ಮುಂದಾಗಿದ್ದಾರೆ.