ಆಧ್ಯಾತ್ಮ

ಧಾರವಾಡದ ಸಲಕಿನಕೊಪ್ಪ ಬಳಿ ನಾಯಿಗೆ ಬೈಕ್ ಡಿಕ್ಕಿ : ನಾಯಿ,‌ ಮಹಿಳೆ ಸ್ಥಳದಲ್ಲಿಯೇ ಸಾವು….!

ಧಾರವಾಡ prajakiran.com : ನಾಯಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ‌ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.‌ 

ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ಗುರುವಾರ ಬೆಳಗ್ಗೆ ಈ
ಘಟನೆ ನಡೆದಿದ್ದು, ಅಪಘಾತದಿಂದಾಗಿ ಸಲಕಿನಕೊಪ್ಪ ಮತ್ತು
ನಿಗದಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಇರ್ಷಾದ್ ಚಪ್ಪರಾರ್ ಅನ್ನೋ 43 ವರ್ಷದ ಮಹಿಳೆ ಮೃತಪಟ್ಟಿದ್ದಾಳೆ. ಮಹಿಳೆಯ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ನಿಗದಿ ಗ್ರಾಮದಿಂದ ಪ್ರಕಾಶ ಅನ್ನೋರ ಬೈಕ್‌ ಮೇಲೆ ಧಾರವಾಡಕ್ಕೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ.

ಆದರೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಯಿ ಕೂಡ ಮೃತಪಟ್ಟಿದೆ.like accident to dog

ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *