ಧಾರವಾಡ prajakiran.com : ವೇಗವಾಗಿ ಬರುತ್ತಿದ್ದ ಬೈಕ್ ಗಳ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಗರಗ ಪೋಲಿಸ್ ಠಾಣೆ ವ್ಯಾಪ್ತಿಯ ಲ್ಲಿ ನಡೆದಿದೆ.
ಧಾರವಾಡದಿಂದ ಬೆಟಗೇರಿ ದೊಡ್ಡವಾಡ ಮಾರ್ಗಮಧ್ಯೆ ಈ ದುರ್ಘಟನೆ ನಡೆದಿದ್ದು ಧಾರವಾಡ ಗರಗ ಪೋಲಿಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಬೈಕ್ ಗಳು ವೇಗವಾಗಿ ಬಂದ ಪರಿಣಾಮ ಎರಡು ಬೈಕ್ ಗಳ ಮಧ್ಯೆ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ರಭಸಕ್ಕೆ ಓರ್ವ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ.
ಇನ್ನೊಂದು ಬೈಕ್ ನಲ್ಲಿ ಓರ್ವ ಸವಾರ ಮತ್ತು ಇಬ್ಬರು ಮಹಿಳೆಯರು ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.
ಮೃತ ಬೈಕ್ ಸವಾರನನ್ನು ಸಿದ್ದು ಎಂದು ಗುರುತಿಸಲಾಗಿದೆ.
ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ