ಅಂತಾರಾಷ್ಟ್ರೀಯ

ಬಿಜೆಪಿಗೆ ತಾಕತ್ತಿದ್ದರೆ ದೇಶದ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಲಿ

ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ

*ತಾಕತ್ತಿದ್ದರೆ ದೇಶದ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಜಾರಿ ಮಾಡಲಿ* : *ಮುಖ್ಯಮಂತ್ರಿ ಸಿದ್ದರಾಮಯ್ಯ*
ಕಲಬುರಗಿ ಪ್ರಜಾಕಿರಣ.ಕಾಮ್     ಆಗಸ್ಟ್ 08: ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

*ಅಪನಂಬಿಕೆ ಬೇಡ*
5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು ಈ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ.

ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು. ಕರ್ನಾಟಕ ಹಿಂದೆ ಎಲ್ಲ ಭರವಸೆಗಳನ್ನು ಈಡೇರಿಸಿದಾಗ ಆರ್ಥಿಕವಾಗಿ ಸುಭದ್ರವಾಗಿತ್ತು.

ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ, ಬೆಲೆ ಏರಿಕೆ ಮಾಡಿ, ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚು ಮಾಡಿ, ರಾಜ್ಯದ ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದು ಬಿಜೆಪಿ ಸರ್ಕಾರ ಎಂದರು.

*ಕಲ್ಯಾಣ ಕರ್ನಾಟಕ ಎಂದು ಹೆಸರನ್ನು ಬದಲಾಯಿಸಿದ್ದೇ ಬಿಜೆಪಿ ಕೊಡುಗೆ:*
ಕೇಂದ್ರದ ನರೇಂದ್ರ ಮೋದಿ ಸರ್ಕಾರ, ಕರ್ನಾಟಕದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರ ರಾಜ್ಯವನ್ನು ಹಿಂದುಳಿಯುವಂತೆ ಮಾಡಿದ್ದು ಭಾಜಪ.

ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡುತ್ತಿರುವುದರಿಂದ ಹೊಟ್ಟೆಉರಿಯಿಂದ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರನ್ನು ಬದಲಾಯಿಸಿದ್ದೇ ಬಿಜೆಪಿ ಕೊಡುಗೆ.

*ಬಡತನ ಹಿಂಸೆಯ ಅತಿ ಕೆಟ್ಟ ರೂಪ*
ವಿರೋಧ ಪಕ್ಷದವರು ಅನ್ನಭಾಗ್ಯ ಕಾರ್ಯಕ್ರಮದ ಬಗ್ಗೆಯೂ ಗುಲ್ಲೆಬ್ಬಿಸಿದರು.

¨ಬಡವರ ವಿರೋಧಿ ಸರ್ಕಾರ ಕೇಂದ್ರ ಸರ್ಕಾರ ಅಕ್ಕಿ ಕೊಡುವುದಾಗಿ ಮೊದಲು ಒಪ್ಪಿಗೆ ನೀಡಿ, ನಂತರ ಅಕ್ಕಿ ಕೊಡದೇ ರಾಜಕೀಯ ಮಾಡಿದರು.

ರೂ. 34 ರಂತೆ ಹಣ ಕೊಡುತ್ತೇವೆ ಎಂದರೂ ಅವರು ಬಡವರಿಗೆ 5 ಕೆಜಿ ಅಕ್ಕಿಯನ್ನು ನೀಡಲಿಲ್ಲ. ಬಡತನ ಹಿಂಸೆಯ ಅತಿ ಕೆಟ್ಟ ರೂಪ ಎಂದು ಮಹಾತ್ಮಾ ಗಾಂಧಿ ಹೇಳಿದ್ದರು.

ದೇಶದಲ್ಲಿ ಅಸಮಾನತೆ ಇದೆ, ಬಡತನ ಹಾಗೂ ಶ್ರೀಮಂತಿಕೆ ಇದೆ. ಇದನ್ನು ಹೋಗಲಾಡಿಸುವ ಕೆಲಸ ನಾವು ಮಾಡಬೇಕು.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಾವು ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 4 ಕೆಜಿಗೆ ಇಳಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಲೆಏರಿಕೆಯ ಮೂಲಕ ಮೋದಿಯವರು ಜನರ ಬಳಿ ಇದ್ದ ದುಡ್ಡು ಕಿತ್ತುಕೊಳ್ಳತ್ತಾರೆ ಎಂದು ಮುಖ್ಯಮಂತ್ರಿಗಳು ವಿರೋಧಪಕ್ಷದವರ ಮಾತುಗಳಿಗೆ ಕಿವಿ ಕೊಡಬೇಕಾದ ಅಗತ್ಯವಿಲ್ಲ ಎಂದರು.

*ಮಾತಿಗೆ ತಪ್ಪುವುದಿಲ್ಲ*
ಕರ್ನಾಟಕ ಸರ್ಕಾರ ಎಂದಿಗೂ ಮಾತಿಗೆ ತಪ್ಪುವುದಿಲ್ಲ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೂಲಕ ಹೇಳಿಸಿರುವ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳು ಹಾಗೂ ಬಜೆಟ್ ನಲ್ಲಿ ಹೇಳಿರುವ ಯೋಜನೆಗಳನ್ನು ಜಾರಿ ಮಾಡದೇ ಇರುವುದಿಲ್ಲ ಎಂದು ಭರವಸೆಯಿತ್ತರು.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *